ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನಿನ ಅರಿವು ಅತ್ಯವಶ್ಯಕ: ನ್ಯಾ. ಸುನಿಲ್ ಎಸ್ ಹೊಸಮನಿ

ಕೋಲಾರ: ಕಾನೂನು ವಿದ್ಯಾರ್ಥಿಗಳಿಗೆ ಕಾನೂನಿಗೆ ಸಂಬಂಧಿಸಿದ ಮಾಹಿತಿ ಇದ್ದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಸುನಿಲ್ ಎಸ್ ಹೊಸಮನಿ ತಿಳಿಸಿದರು.

ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ಬುಧವಾರ ಬೆಂಗಳೂರಿನ ಶೇಷಾದ್ರಿಪುರಂ ಕಾನೂನು ಕಾಲೇಜಿನ ಎನ್.ಎಸ್.ಎಸ್ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾನೂನು ಎಂಬುದು ಮಗುವಿನ ಗರ್ಭದಿಂದಲ್ಲೇ ಅನ್ವಯಿಸುತ್ತದೆ ಪ್ರತಿಯೊಬ್ಬರೂ ಸಮಾಜದ ಏಳಿಗೆಗಾಗಿ ಕೆಲಸ ಮಾಡಬೇಕು ಸಮಾಜದ ಕೆಲಸವೆಂದರೆ ಅದು ಎನ್.ಎಸ್.ಎಸ್ ವಿಧ್ಯಾರ್ಥಿಗಳಿಗೆ ಸೀಮಿತವಾಗಬಾರದು ಸಮಾಜದ ಕೆಲಸ ಅದು ನನ್ನ ಕೆಲಸ ಅಂತ ಭಾವನೆ ಪ್ರತಿಯೊಬ್ಬರಲ್ಲೂ ಬರಬೇಕು ಜೊತೆಗೆ ಗ್ರಾಮಸ್ಥರಲ್ಲೂ ತರಬೇಕು ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ಇದರ ಬಗ್ಗೆ ಮಾಹಿತಿ ತಿಳಿದಿರಬೇಕು ಎಂದರು.

ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರು ತಮ್ಮ ಹಕ್ಕುಗಳನ್ನು ಪಡೆಯಲು ಸರಿಯಾದ ಕಾನೂನಿನ ಅರಿವು ನೆರವು ಇಲ್ಲದವರು ತಮಗೆ ಬರಬೇಕಾದ ನ್ಯಾಯ ಸಮ್ಮತ ಆಸ್ತಿಗಾಗಿ, ಅಧಿಕಾರಿಗಳ ಕರ್ತವ್ಯ ಲೋಪ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉಚಿತ ಕಾನೂನು ನೆರವು ಲಭ್ಯವಿದೆ ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಬಹುದು. ಇದರಿಂದ ಹಣ, ಸಮಯ ಉಳಿತಾಯವಾಗುತ್ತದೆ ಸೆಪ್ಟೆಂಬರ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬಹುದಾಗಿದೆ ಎಂದರು

ಈ ಸಂದರ್ಭದಲ್ಲಿ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ.ವೋಡೇ ಪಿ.ಕೃಷ್ಣ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸೇವೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಏಳು ದಿನಗಳ ಕಾಲ ನಗರವನ್ನು ಬಿಟ್ಟು ಈ ಸಣ್ಣ ಗ್ರಾಮದಲ್ಲಿ ಕಲಿತಿದ್ದನ್ನು ಮುಂದಿನ ದಿನಗಳಲ್ಲಿ ಕೂಡ ಅಳವಡಿಸಿಕೊಳ್ಳಬೇಕಾಗಿದೆ ಜೊತೆಗೆ ಗಾಂಧಿಯವರ ಗ್ರಾಮಗಳ ನಿಜವಾದ ಕಲ್ಪನೆ ಜಾರಿ ಯಾಗಬೇಕಾದರೆ ಗ್ರಾಮಗಳು ಅಭಿವೃದ್ಧಿಯಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಧ್ವನಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಏಳು ದಿನಗಳ ಕಾಲ ಗ್ರಾಮದಲ್ಲಿ ನಡೆದ ಚಟುವಟಿಕೆಗಳ ಬಗ್ಗೆ ತಿಳಿಸಿಕೊಟ್ಟರು ಗ್ರಾಮದಲ್ಲಿ ಸಂಜೆ ಸಮಯದಲ್ಲಿ ಹಿರಿಯರಿಗೆ ಶಾಲಾ ಮಕ್ಕಳಿಗೆ ನಡೆಸಿದ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷ ರೇಣುಕಾಂಭ ಮುನಿರಾಜು, ಉಪಾಧ್ಯಕ್ಷ ನಾಗೇಂದ್ರ, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್ ಸದಸ್ಯ ವೀರಭದ್ರಯ್ಯ, ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಣೀತಾ, ಉಪನ್ಯಾಸಕರಾದ ಸುಕನ್ಯಾ, ಸಂತೋಷ್, ವೆಂಕಟಾಪುರ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಸಹ ಶಿಕ್ಷಕ ಭದ್ರೇಗೌಡ, ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿಧ್ಯಾರ್ಥಿಗಳು, ಗ್ರಾಮಸ್ಥರು ಇದ್ದರು

Leave a Reply

Your email address will not be published. Required fields are marked *