ಕೊಡಗು : ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ದಾಳಿ ವೇಳೆ ನಂಜುಂಡೇಗೌಡ ಮನೆಯಲ್ಲಿ 11.5 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಮಾತ್ರವಲ್ಲ ಮನೆಯಲ್ಲಿ ಸಾಕಷ್ಟು ಚಿನ್ನಾಭರಣವೂ ಪತ್ತೆಯಾಗಿದೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಚಿನ್ನದ ತೂಕ ಪರಿಶೀಲನೆಗೆ ಅಕ್ಕ ಸಾಲಿಗರನ್ನು ಕರೆಸುತ್ತಿದ್ದಾರೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಮೂವರು ಇನ್ಸ್‌ಪೆಕ್ಟರ್ ಮತ್ತು 10ಕ್ಕೂ ಹೆಚ್ಚು ಸಿಬ್ಬಂದಿ ದಾಳಿ ಮಾಡಿದ್ದಾರೆ. ಕೊಡಗು ಮತ್ತು ಮೈಸೂರು ಜಿಲ್ಲೆ ಲೋಕಾಯುಕ್ತ ಪೊಲೀಸರ ಜಂಟಿ ಕಾರ್ಯಾಚರಣೆ ಇದಾಗಿದೆ. ಮಡಿಕೇರಿಯ ಕಾರ್ಯಪ್ಪ‌ ವೃತ್ತದ ಬಳಿಯಿರುವ ನಂಜುಂಡೇಗೌಡರ ವಸತಿಗೃಹದ ಮೇಲೆ ದಾಳಿಯಾಗಿದ್ದು, ಕಡತಗಳ ಪರಿಶೀಲನೆ ನಡೆಯುತ್ತಿದೆ. ಪಿರಿಯಾಪಟ್ಟಣ ತಾಲೂಕಿನ ಮಾಕನಳ್ಳಿಯಲ್ಲಿರುವ ಮಾವನ ಮನೆ ಹಾಗೂ ಮೈಸೂರಿನಲ್ಲಿರುವ ಭಾವನ ಮನೆಯಲ್ಲೂ ಶೋಧ ಕಾರ್ಯ ನಡೆಯುತ್ತಿದೆ.

Leave a Reply

Your email address will not be published. Required fields are marked *