ಜಕ್ಕಸಂದ್ರ ಶಾಲೆಯಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಮಾಲೂರು:- ಅನೇಕ ವೀರಸೇನಾನಿಗಳ ತ್ಯಾಗ ಬಲಿದಾನಗಳ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ, ಅಂತಹ ಸ್ವಾತಂತ್ರ್ಯವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ ರವರು ತಿಳಿಸಿದರು

ತಾಲೂಕಿನ ಜಕ್ಕಸಂದ್ರ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ ರವರು ಮಾತನಾಡಿ
ನಮಗೆ ಸ್ವಾತಂತ್ರ್ಯ ಸುಮ್ಮನೆ ಸಿಗಲಿಲ್ಲ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಹಗಲು ರಾತ್ರಿ ಎನ್ನದೆ ತ್ಯಾಗ, ಬಲಿದಾನ , ಹೋರಾಟಗಳಿಂದ ಇಂದು ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅವರ ಈ ಹೋರಾಟದ ಫಲವೇ ನಾವು ನೀವೆಲ್ಲರು ಅನುಭವಿಸುತ್ತಿರುವ ಸ್ವಾತಂತ್ರ್ಯದ ಸವಿಯಾಗಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿಶೇಷವಾಗಿ ಜಕ್ಕಸಂದ್ರ ಗ್ರಾಮದಲ್ಲಿ ಶಾಲೆಯ ಮಕ್ಕಳಿಗೆ ಗಿಡ ನೀಡುವ ಮೂಲಕ ವಿಭಿನ್ನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಹಾಗೂ ಎಲ್ಲರಿಗೂ ಗಿಡಮರಗಳ ಪ್ರಾಮುಖ್ಯತೆ ಬಗ್ಗೆ ತಿಳಿಸಿ ಸಿಹಿ ಅಂಚಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮದ ಯುವ ಮುಖಂಡರಾದ ಶ್ರೀ ಮುನಿರಾಜು, ಮಾಜಿ ಗ್ರಾ.ಪಂ. ಸದಸ್ಯರಾದ ದೇವರಾಜು, ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷರು ರಾಜೇಂದ್ರ, ಶಾಲಾ ಶಿಕ್ಷಕರಾದ ಚಂದ್ರಶೇಖರ್, ಮುಖ್ಯ ಶಿಕ್ಷಕರಾದ, ಟಿ ವಿ.ಕೃಷ್ಣಮೂರ್ತಿ, ನಿವೃತ್ತ ಶಿಕ್ಷಕರಾದ ಚಂದ್ರಪ್ಪ, ಎಸ್ ಡಿಎಂ ಸಿ ಅಧ್ಯಕ್ಷರು ನಾಗರಾಜು, ಗ್ರಾ.ಪಂ ಸದಸ್ಯರಾದ ಶಿವಶಂಕರ, ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಸಂತ್, ಶಾಲೆಯ ಹಳೆಯ ವಿದ್ಯಾರ್ಥಿಗಳು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *