ಮಾಲೂರು: ಗ್ರಾಮೀಣ ಭಾಗದ ಜನತೆಗೆ ಆರೋಗ್ಯದ ಹಿತ ದೃಷ್ಟಿಯಿಂದ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುತ್ತಿದ್ದು ಪ್ರತಿಯೊಬ್ಬರು ಈ ಅವಕಾಶಗಳನ್ನು ಉಬ್ಸದುಪಯೋಗಪಡಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಶಾಸಕ ಕೆ.ವೈ. ನಂಜೇಗೌಡ ಹೇಳಿದರು.

ಮಾಲೂರು: ಗ್ರಾಮೀಣ ಭಾಗದ ಜನತೆಗೆ ಆರೋಗ್ಯದ ಹಿತ ದೃಷ್ಟಿಯಿಂದ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುತ್ತಿದ್ದು ಪ್ರತಿಯೊಬ್ಬರು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಶಾಸಕ ಕೆ.ವೈ. ನಂಜೇಗೌಡ ಹೇಳಿದರು.

ಮಾಸ್ತಿ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಡಾ.ಕಿರಣ್ ಸೋಮಣ್ಣ ಚಾರಿಟಬಲ್ ಟ್ರಸ್ಟ್ ಹಾಗೂ ಸಮಾನ ಮನಸ್ಕರ ತಂಡ, ಕೋಲಾರ ಆರ್ ಜಾಲಪ್ಪ ಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ, ಚಿಕಿತ್ಸಾ ಔಷಧಿ ವಿತರಣೆ, ರಕ್ತ ದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಜನತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವಿರುವುದಿಲ್ಲ ತಮ್ಮ ಕೆಲಸ ಕಾರ್ಯಗಳ ಒತ್ತಡದ ನಡುವೆ ಆರೋಗ್ಯದ ಕಡೆ ಹೆಚ್ಚು ಗಮನಹರಿಸುವುದು ಕಡಿಮೆ. ಆರೋಗ್ಯವೇ ಮಹಾಭಾಗ್ಯ ಎಂಬಂತೆ ಗ್ರಾಮೀಣ ಭಾಗದ ಜನತೆ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯಾ ಗ್ರಾಮ ಪಂಚಾಯಿತಿಗಳು ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿ ಗ್ರಾಮೀಣ ಭಾಗದ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಮಾಸ್ತಿ ಹಾಗೂ ಟೇಕಲ್ ಹೋಬಳಿಯ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರು ಹಾಗೂ ಬಡ ಜನತೆ ವಾಸವಾಗಿದ್ದು ಅವರ ಆರೋಗ್ಯದ ಹಿತ ದೃಷ್ಟಿಯಿಂದ ಡಾ.ಕಿರಣ್ ಸೋಮಣ್ಣ ಅವರು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಒಂದು ತಿಂಗಳ ಹಿಂದೆ ಮಾಸ್ತಿ ಹೋಬಳಿಯ ಮಲಕನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿಪಡಿಸಿದ್ದು, ಎರಡೂ ಹೋಬಳಿಗಳ ಜನರ ಆರೋಗ್ಯದ ದೃಷ್ಟಿಯಿಂದ ಮಾಸ್ತಿ ಗ್ರಾಮದಲ್ಲಿ ವಿವಿಧ ವೈದ್ಯಕೀಯ ತಜ್ಞರ ಸಮ್ಮುಖದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿ ಉಚಿತವಾಗಿ ಮಧುಮೇಹ ರಕ್ತದೊತ್ತಡ ಹೃದಯ ಸಂಭಂದಿಸದ ಕಾಯಿಲೆಗಳು, ಸಾಮಾನ್ಯ ಕಾಯಿಲೆಗಳಿಗೂ ತಪಾಸಣೆ ನಡೆಸಿ ಉಚಿತ ವೈದ್ಯಕೀಯ ಸೌಲಭ್ಯ ಹಾಗೂಔಷಧಿಗಳನ್ನು ವಿತರಣೆ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.
ಟ್ರಸ್ಟ್ನ ಅಧ್ಯಕ್ಷ ಡಾ.ಕಿರಣ್ ಸೋಮಣ್ಣ ಮಾತನಾಡಿ, ಗ್ರಾಮೀಣ ಭಾಗದ ಬಡ ಜನರ ಆರೋಗ್ಯ ಹಾಗೂ ಶಿಕ್ಷಣದ ಹಿತ ದೃಷ್ಠಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜ ಸೇವೆ ಮಾಡುತ್ತಿದ್ದು, ತಾಲೂಕಿನಲ್ಲಿ ಇದುವರೆಗೂ 4ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು. ವೈದ್ಯಕೀಯ ವೃತ್ತಿಯ ಜೊತೆಗೆ ಸಮಾಜ ಸೇವೆ ಮಾಡಲು ಅವಕಾಶ ಸಿಕ್ಕಿದ್ದು, ಶಾಸಕ ಕೆ.ವೈ.ನಂಜೇಗೌಡ ಹಾಗೂ ಹಿರಿಯರ ಮಾರ್ಗದರ್ಶನದಂತೆ ಮಾಸ್ತಿ ಮತ್ತು ಟೇಕಲ್ ಹೋಬಳಿಯ ಗಡಿಭಾಗದ ಬಡಜನರ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದು, ಪ್ರೋತ್ಸಾಹ ನೀಡುತ್ತಿರುವ ತಾಲೂಕಿನ ಎಲ್ಲಾ ನನ್ನ ಹಿತೈಷಿಗಳು ಹಾಗೂ ಸ್ನೇಹಿತರಿಗೆ ಕೃತಜ್ಞತೆಗಳು ಸಲ್ಲಿಸುವುದಾಗಿ ಹೇಳಿದರು.
ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ 2000ಕ್ಕೂ ಹೆಚ್ಚು ಮಂದಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯಕೀಯ ಸೌಲಭ್ಯ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಅಂಜನಿ ಸೋಮಣ್ಣ ಡಾ.ಮುದ್ದು ಗಂಗಾಧರ್,ಪ್ರವೀಣ್ , ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹನುಮಂತಯ್ಯ, ಚನ್ನರಾಯಪ್ಪ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯನರಸಿಂಹ, ಡಾ. ವಿನಾಯಕ ಪ್ರಭು, ಮಾಸ್ತಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ, ಆಂಜಿನಪ್ಪ, ಉಪಾಧ್ಯಕ್ಷ ಚೇತನ್‌ಕುಮಾರ್, ಕೋಚಿಮುಲ್ ಮಹಿಳಾ ನಿರ್ದೇಶಕಿ ಕಾಂತಮ್ಮ, ಬಿ.ಆರ್. ಶ್ರೀನಿವಾಸ್, ಅಕ್ರಂಪಾಷ ಸೇರಿದಂತೆ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *