ಮಾಲೂರು: ಜಗತ್ತಿನಲ್ಲಿ ಅತಿ ಹೆಚ್ಚು ಜಾತಿ ಧರ್ಮಗಳನ್ನು ಒಳಗೊಂಡಿರುವ ಭಾರತ ದೇಶಕ್ಕೆ ಡಾ. ಬಿಆರ್ ಅಂಬೇಡ್ಕರ್ ಅವರು ಅತ್ಯಂತ ಶ್ರೇಷ್ಠ ಸಂವಿಧಾನವನ್ನು ನೀಡಿರುವುದರಿಂದ ಪ್ರತಿಯೊಬ್ಬರು ಸಮಾನತೆಯಿಂದ ಬದುಕಲು ಸಾಧ್ಯವಾಗಿದೆ ಎಂದು ದಮನಿತರ ಸಂಘರ್ಷ ಸಮಿತಿ ಸಂಸ್ಥಾಪಕ ಫ್ರೆಂಡ್ಸ್ ಸಂತೋಷ್ ಅವರು ಹೇಳಿದರು.

ಮಾಲೂರು: ಜಗತ್ತಿನಲ್ಲಿ ಅತಿ ಹೆಚ್ಚು ಜಾತಿ ಧರ್ಮಗಳನ್ನು ಒಳಗೊಂಡಿರುವ ಭಾರತ ದೇಶಕ್ಕೆ ಡಾ. ಬಿಆರ್ ಅಂಬೇಡ್ಕರ್ ಅವರು ಅತ್ಯಂತ ಶ್ರೇಷ್ಠ ಸಂವಿಧಾನವನ್ನು ನೀಡಿರುವುದರಿಂದ ಪ್ರತಿಯೊಬ್ಬರು ಸಮಾನತೆಯಿಂದ ಬದುಕಲು ಸಾಧ್ಯವಾಗಿದೆ ಎಂದು ದಮನಿತರ ಸಂಘರ್ಷ ಸಮಿತಿ ಸಂಸ್ಥಾಪಕ ಫ್ರೆಂಡ್ಸ್ ಸಂತೋಷ್ ಅವರು ಹೇಳಿದರು.

ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಉದ್ಯಾನವನದಲ್ಲಿ ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವದಿನದ ಅಂಗವಾಗಿ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬರುವ ಸಮಯದಲ್ಲಿ ಸಂವಿಧಾನದ ಅವಶ್ಯಕತೆ ಇದ್ದಾಗ ಡಾ. ಬಿಆರ್ ಅಂಬೇಡ್ಕರ್ ಅವರು ನಿರಂತರವಾಗಿ ಅಧ್ಯಯನ ಮಾಡಿ 2 ವರ್ಷ 11 ತಿಂಗಳು 18 ದಿನಗಳು ಶ್ರಮ ಪಟ್ಟು ಎಲ್ಲರಿಗೂ ಸಮ ಪಾಲು- ಎಲ್ಲರಿಗೂ ಸಮಬಾಳು ಎಂಬಂತೆ ಸಮಾನತೆ ನೀಡುವ ಮೂಲಕ ಅತ್ಯಂತ ಶ್ರೇಷ್ಠವಾದ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ರಚಿಸಿಕೊಟ್ಟಿದ್ದರಿಂದ ಇಂದು ದೇಶದ ಪ್ರತಿಯೊಬ್ಬ ಪ್ರಜೆಯು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ. ಇನ್ನೂ ರಾಜ್ಯದಲ್ಲಿ ಸರ್ಕಾರ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಎಲ್ಲಾ ಕಡೆ ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದಬೇಕು ಎಂದು ಆದೇಶಿಸಿದ್ದು. ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಇಂದಿನಿಂದ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯವಾಗಿದೆ. ಇದರಿಂದ ಪ್ರತಿಯೊಬ್ಬರಿಗೂ ಸಂವಿಧಾನದ ಅರಿವು ಮೂಡುತ್ತದೆ. ಈ ಮಹತ್ವದ ಕಾರ್ಯಕ್ರಮ ವನ್ನು ಜಾರಿ ಮಾಡಿದ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರಿಗೆ ಮತ್ತು ಅವರ ಸರ್ಕಾರಕ್ಕೆ ನಮ್ಮ ಸಂಘಟನೆ ವತಿಯಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸೊಣ್ಣೂರು ಗೋವಿಂದ್, ಸಂಪಂಗೆರೆ ಅಶೋಕ್, ಎನ್ ಎಂ ಚಂದ್ರಪ್ಪ, ಸೊಣ್ಣೂರು ಮುನಿರಾಜು, ಗೋಪಾಲ್, ನಾಗೇಶ್, ಮುರಳಿ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *