ಮಾಲೂರು : ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಮ ಪ್ರಸಾದ್ ಅವರು ಅಧ್ಯಕ್ಷರಾಗಿ ಪದ್ಮಮ್ಮ ವೆಂಕಟೇಶ್ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರೆ.

ಮಾಲೂರು : ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಮ ಪ್ರಸಾದ್ ಅವರು ಅಧ್ಯಕ್ಷರಾಗಿ ಪದ್ಮಮ್ಮ ವೆಂಕಟೇಶ್ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರೆ.
ಚಿಕ್ಕತಿರುಪತಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ದಿನಾಂಕ ನಿಗಧಿಯಾಗಿದ್ದು ಸದರಿ ಅಧ್ಯಕ್ಷ ಸ್ಥಾನವು ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನವು ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿದ್ದು. ಅಧ್ಯಕ್ಷ ಸ್ಥಾನಕ್ಕೆ ರಾಮ ಪ್ರಸಾದ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪದ್ಮಮ್ಮ ವೆಂಕಟೇಶ್ ಅವರು ನಾಮ ಪತ್ರ ಸಲ್ಲಿಸಿದ್ದು. ಎರಡೂ ಸ್ಥಾನಗಳಿಗೆ ತಲಾ ಒಂದೊAದು ನಾಮಪತ್ರ ಮಾತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಗಿ ರಾಮ ಪ್ರಸಾದ್ ಮತ್ತು ಉಪಾಧ್ಯಕ್ಷರಾಗಿ ಪದ್ಮಮ್ಮ ವೆಂಕಟೇಶ್ ಅವರು ಆಯ್ಕೆಯಾಗಿದ್ದರೆ. ಎಂದು ಚುನಾವಣೆ ಅಧಿಕಾರಿ ಪೆದ್ದಣ್ಣ ಅವರು ಘೋಷಿಸಿದರು.
ಮಾಸ್ತಿ ಎಸ್ಸಿ ಬ್ಲಾಕ್ ಕಾಂಗ್ರೆಸ್ ಕಾಂಗ್ರೆಸ್ ಅಧ್ಯಕ್ಷ ಎ.ಕೆ ವೆಂಕಟೇಶ್ ಅವರು ಮಾತನಾಡಿ ಇಂದು ಚಿಕ್ಕ ತಿರುಪತಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣೆ ಶಾಸಕ ಕೆ ವೈ ನಂಜೇಗೌಡ ಅವರ ಮಾರ್ಗದರ್ಶನದಂತೆ ನಡೆದಿದ್ದು. ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗಟ್ಟಿನಿಂದ ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಿಕೊಂಡಿದ್ದು. ಎಲ್ಲರಿಗೂ ಧನ್ಯವಾದಗಳು ತಿಳಿಸುತ್ತಾ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿಯನ್ನು ಶಾಸಕ ಸಹಕಾರದೊಂದಿಗೆ ಪಂಚಾಯಿತಿ ಎಲ್ಲಾ ಸದಸ್ಯರ ಸಹಮತದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಅಭಿವೃದ್ಧಿಪಡಿಸಿ ಮಾದರಿ ಪಂಚಾಯಿತಿಯನ್ನಾಗಿ ಮಾಡಲಿದ್ದರೆ ಎಂದರು.
ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ರಾಮ ಪ್ರಸಾದ್ ಅವರು ಮಾತನಾಡಿ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರು ಸರ್ವಾನುಮತದಿಂದ ನನಗೆ ಈ ಅವಕಾಶ ನೀಡಿದ್ದು ಎಲ್ಲರಿಗೂ ನಾನು ಚಿರ ಋಣಿಯಾಗಿದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ವೀರ ಭದ್ರಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿವಿ ಮಂಜುನಾಥ್, ಕುಮಾರ್, ಗಿರೀಜ ನಾಗೇಶ್, ಕನಕರಾಜು, ಸತೀಶ್, ನಾಗೇಶ್, ರಾಘವೇಂದ್ರ, ಪಿಡಿಒ ಕಾಶೀನಾಥ್, ಸ್ವರ್ಣಲತ, ನಾಗರಾಜ್, ಸೇರಿದಂತೆ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *