ಮಾಲೂರು : ತಾಲ್ಲೂಕಿನ ಪುರಾಣ ಪ್ರಸಿದ್ಧ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗಾನಸುಧಾ ಸಾಂಸ್ಕೃತಿಕ ಕಲಾ ಸಂಘ ವತಿಯಿಂದ ಹಮ್ಮಿಕೊಂಡಿದ್ದ ಸುಗಮ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಸ್ತ್ರಿಯ ಸಂಗೀತ, ಭಕ್ತಿ ಸಂಗೀತ ಹಾಗೂ ಸುಗಮ ಸಂಗೀತ ಕಾರ್ಯಕ್ರಮಗಳಲ್ಲಿ ಕಲಾವಿದರ ಸೇವೆ ಅನನ್ಯ ವಾದದ್ದು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಹರೀಶ್ ರೆಡ್ಡಿ ಅವರು ಹೇಳಿದರು.

ಮಾಲೂರು : ತಾಲ್ಲೂಕಿನ ಪುರಾಣ ಪ್ರಸಿದ್ಧ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗಾನಸುಧಾ ಸಾಂಸ್ಕೃತಿಕ ಕಲಾ ಸಂಘ ವತಿಯಿಂದ ಹಮ್ಮಿಕೊಂಡಿದ್ದ ಸುಗಮ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಸ್ತ್ರಿಯ ಸಂಗೀತ, ಭಕ್ತಿ ಸಂಗೀತ ಹಾಗೂ ಸುಗಮ ಸಂಗೀತ ಕಾರ್ಯಕ್ರಮಗಳಲ್ಲಿ ಕಲಾವಿದರ ಸೇವೆ ಅನನ್ಯ ವಾದದ್ದು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಹರೀಶ್ ರೆಡ್ಡಿ ಅವರು ಹೇಳಿದರು.
ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿಯ ದರ್ಶನಕ್ಕೆ ಕೋಲಾರ, ಬೆಂಗಳೂರು, ಹೊಸಕೋಟೆ ಹೊಸಕೋಟೆ ಹಾಗೂ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ತಮಿಳುನಾಡು ಪ್ರದೇಶಗಳಿಂದ ವಿಶೇಷವಾಗಿ ಶ್ರಾವಣ ಮಾಸದಲ್ಲಿ ಆಗಮಿಸುತ್ತಾರೆ ಹಾಗೂ ಚೈತ್ರ ಮಾಸದಲ್ಲಿ ನಡೆಯುವ ಜಾತ್ರ ಮಹೋತ್ಸವವು 11 ದಿನಗಳ ಕಾಲ ನಡೆಯುತ್ತದೆ. ಡಿಸೆಂಬರ್ ತಿಂಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ ಎಂದು ತಿಳಿಸಿದರು.ಕಲಾವಿದ ಗೌತಮ್ ಮಾತನಾಡಿ, ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಸುಮಾರು 15 ವರ್ಷಗಳಿಂದಲೂ ನಮ್ಮ ಗಾನಸುಧಾ ಸಾಂಸ್ಕೃತಿಕ ಕಲಾ ಸಂಸ್ಥೆ ವತಿಯಿಂದ ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಈ ದಿನ ಸಹ ಗಣ್ಯರ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದಿಂದ ಈ ಒಂದು ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿಯೂ ಸಹ ಸಂಗೀತ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಸಂಸ್ಥೆ ವತಿಯಿಂದ ಸುಗಮ ಸಂಗೀತ. ಭಕ್ತಿ ಸಂಗೀತ ಗೀತಾ ಗಾಯನ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವುದು ಎಂದರು.

ಇದೇ ಸಂದರ್ಭದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಹರೀಶ್ ರೆಡ್ಡಿ, ವೆಂಕಟೇಶ್ ಗೌಡ, ಅಶ್ವಥ್ ನಾರಾಯಣ ಗೌಡ, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಸೆಲ್ವಮಣಿ, ಜಮಮಂಗಲ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾದ ವಸಂತಮ್ಮ ಶಶಿಕುಮಾರ್. ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಸದಸ್ಯರಾದ ರಾಧಮ್ಮ ಮುನಿರಾಜು (ಮೇಸ್ತ್ರಿ) ರವರನ್ನು ಗಾನಸುಧಾ ಸಾಂಸ್ಕೃತಿಕ ಕಲಾ ಕಲಾ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಅಶ್ವಥ್ ನಾರಾಯಣ ಗೌಡ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಟಿ. ಆರ್ ವೆಂಕಟೇಶ್ ಗೌಡ, ಮಾಜಿ ಸದಸ್ಯ ಆಲಂಬಾಡಿ ಸುರೇಶ್ ಬಾಬು. ಕ್ಷೇತ್ರ ಸಮನ್ವಯಾಧಿಕಾರಿಗಳಾದ ನಂಜುಂಡ ಗೌಡ, ರಾಜಶೇಖರ್, ಗುಟ್ಟಪ್ಟಸ್ವಾಮಿ. ಕೃಷಿ ಅಧಿಕಾರಿಗಳಾದ ನಾರಾಯಣಸ್ವಾಮಿ, ಮುಖಂಡರಾದ ಚಿಕ್ಕತಿರುಪತಿ ವೇಣುಗೋಪಾಲ್. ವೆಂಕಟೇಶ್. ಆಲಂಬಾಡಿ ಗೋಪಾಲ್ ಕಲಾವಿದರು ಕಲಾವಿದರಾದ ನಾಗೊಂಡಹಳ್ಳಿ ಚಂದ್ರಪ್ಪ. ತಬಲ ಸೋಮಶೇಖರ್, ಹಾರ್ಮೋನಿಯಂ ಯುವರಾಜ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *