ಮಾಲೂರು : ಭಾರತ ದೇಶದಲ್ಲೇ ಮೊಟ್ಟ ಮೊದಲಿಗೆ ಸoವಿಧಾನದ ಪೀಠಿಕೆಯನ್ನು ಓದುವ ಮೂಲಕ ಜನ ಸಾಮಾನ್ಯರಿಗೆ ಸಂವಿಧಾನದ ಮಹತ್ವವನ್ನು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಕೆವೈ ನಂಜೇಗೌಡ ಅವರು ತಿಳಿಸಿದರು.

ಮಾಲೂರು : ಭಾರತ ದೇಶದಲ್ಲೇ ಮೊಟ್ಟ ಮೊದಲಿಗೆ ಸoವಿಧಾನದ ಪೀಠಿಕೆಯನ್ನು ಓದುವ ಮೂಲಕ ಜನ ಸಾಮಾನ್ಯರಿಗೆ ಸಂವಿಧಾನದ ಮಹತ್ವವನ್ನು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಕೆವೈ ನಂಜೇಗೌಡ ಅವರು ತಿಳಿಸಿದರು.

ಪಟ್ಟಣದ ಹೋಂಡಾ ಕ್ರೀಡಾಂಗಣದಲ್ಲಿ ಅರಿವು ಭಾರತಭಾರತ ಕೋಲಾರ ಮತ್ತು ಶಿಕ್ಷಣ ಇಲಾಖೆ ವತಿಯಿಂದ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಂದಿನ ಕಾಲದಲ್ಲಿ ಶಾಲೆಯಿಂದ ಹೊರಗಡೆ ಕುಳಿತು ವಿದ್ಯೆಕಲಿತ ಡಾ. ಬಿಆರ್ ಅಂಬೇಡ್ಕರ್ ಅವರು ನಿರಂತರವಾಗಿ ಅಧ್ಯಯನ ಮಾಡಿ ಇಂದು ಇಡೀ ವಿಶ್ವಕ್ಕೆ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ನೀಡಿದ್ದು. ಈ ದೇಶದ ಪ್ರತಿಯೊಬ್ಬ ಪ್ರಜೆಯು ನೆಮ್ಮದಿಯಿಂದ ಬದುಕಲು ಸಂವಿಧಾನ ಸಹಕಾರಿಯಾಗಿದೆ. ಇನ್ನೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜನರಿಗೆ ಸoವಿಧಾನದ ಅರಿವು ಮೂಡಿಸಲೆಂದು ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುವ ಮೂಲಕ ಸಂವಿಧಾನದ ಗೌರವವನ್ನು ಎತ್ತಿ ಹಿಡಿದಿದ್ದಾರೆ. ಇಂದು ಏಕಕಾಲದಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದುತ್ತಿದ್ದು. ಇದು ಕರ್ನಾಟಕದ ಮೂಲಕ ದೇಶದ ಎಲ್ಲಾ ರಾಜ್ಯಗಳಲ್ಲಿ ಆಚರಣೆ ಮಾಡಲು ಮಾದರಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸoವಿಧಾನವನ್ನು ಈ ದೇಶದ ಪ್ರಜೆಗಳಾದ ನಾವು ನಮಗೆ ನಾವೇ ಅರ್ಪಣೆ ಮಾಡಿ ಕೊಂಡಿದ್ದೇವೆ. ಅದನ್ನು ಓದುವ ಮೂಲಕ ಅದರಿಂದ ಆದ ಅನುಕೂಲಗಳು ಅದರಿಂದ ಸಿಕ್ಕಿರುವ ಅವಕಾಶಗಳ ಬಗ್ಗೆ ತಿಳಿದು ಕೊಳ್ಳಬಹುದಾಗಿದೆ. ಸಂವಿಧಾನ ಪೀಠಿಕೆಯನ್ನು ಓದುವುದರ ಜೊತೆಗೆ ಸoವಿಧಾನವನ್ನು ಉಳಿಸುವುದು ನಮ್ಮ ಗುರಿ ಹಾಗೇ ಸoವಿಧಾನದ ವಿರುದ್ಧ ಯಾರೇ ಮಾತನಾಡಿದರು ಅವರ ವಿರುದ್ಧ ಹೋರಾಟ ಮಾಡುವುದು ಸoವಿಧಾನವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ ರಮೇಶ್, ತಾ.ಪಂ ಇ ಒ ಕೃಷ್ಣಪ್ಪ, ಡಿ ಡಿ ಪಿ ಐ ರಾಮಚಂದ್ರಪ್ಪ, ಅರಿವು ಶಿವಪ್ಪ, ಲಕ್ಷ್ಮೀ ನಾರಾಯಣ, ಮುರಳೀಧರ್, ಆರಕ್ಷಕ ವೃತ್ತ ನಿರೀಕ್ಷಕ ಚಂದ್ರಧರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಅಧಿಕಾರಿಗಳು, ಪಟ್ಟಣದ ಎಲ್ಲಾ ಶಾಲಾ ಕಾಲೇಜು ಶಿಕ್ಷಕರು ಸುಮಾರು ಐದು ಸಾವಿರಕ್ಕೂ ಹೆಚ್ಚು ಮಕ್ಕಳು ಇದ್ದರು.

Leave a Reply

Your email address will not be published. Required fields are marked *