ಮಾಲೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ಗೊಳ್ಳುತ್ತಿರುವ ಗೃಹಲಕ್ಷ್ಮೀ ಯೋಜನೆಯ ನೇರ ಪ್ರಸಾರ ಕಾರ್ಯಕ್ರಮದ ಉದ್ಘಾಟನೆಯನ್ನು ದೊಡ್ಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮರಾವತಿ ಆನಂದರೆಡ್ಡಿ ಮತ್ತು ಉಪಾಧ್ಯಕ್ಷ ವೆಂಕಟರಮಣಪ್ಪ ನವರು ನೆರವೇರಿಸಿದರು.

ಮಾಲೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ಗೊಳ್ಳುತ್ತಿರುವ ಗೃಹಲಕ್ಷ್ಮೀ ಯೋಜನೆಯ ನೇರ ಪ್ರಸಾರ ಕಾರ್ಯಕ್ರಮದ ಉದ್ಘಾಟನೆಯನ್ನು ದೊಡ್ಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮರಾವತಿ ಆನಂದರೆಡ್ಡಿ ಮತ್ತು ಉಪಾಧ್ಯಕ್ಷ ವೆಂಕಟರಮಣಪ್ಪ ನವರು ನೆರವೇರಿಸಿದರು.

‌ಈ ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಬಿ.ಆರ್ ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ 5 ಗ್ಯಾರೆಂಟಿಗಳ ಪೈಕಿ ಈಗಾಗಲೇ ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ ಮೂರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇಂದು 4 ನೇ ಗ್ಯಾರೆಂಟಿ ಮತ್ತು ಬಹುದೊಡ್ಡ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯನ್ನು ಮೈಸೂರಿನಲ್ಲಿ ರಾಷ್ಟ್ರ ನಾಯಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವರು ಅವರು ಚಾಲನೆ ನೀಡಿದ್ದು ಪ್ರತಿ ತಿಂಗಳು 2 ಸಾವಿರ ಹಣ ಪ್ರತಿ ಕುಟುಂಬದ ಯಜಮಾನಿಗೆ ಜಮೆ ಆಗಲಿದೆ. ಈ ರೀತಿ ನಮ್ಮ ಸರ್ಕಾರ ಈ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ನುಡಿದಂತೆ ನಡೆದಿದೆ. ಇನ್ನೂ ಈ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಲು ನಮ್ಮ ಶಾಸಕರಾದ ಕೆವೈ ನಂಜೇಗೌಡ ನೇತೃತ್ವದಲ್ಲಿ ಆಯೋಜಿಸಿದ್ದು ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಂದ ಹೆಚ್ಚು ಫಲಾನುಭವಿಗಳು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಇನ್ನಷ್ಟು ಕಾರ್ಯಕ್ರಮಗಳನ್ನು ನೀಡಿ ಸಾಮಾನ್ಯ ಜನರಪರ ನಿಲ್ಲುತ್ತದೆ ಎಂದರು.

‌ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಪ್ಪ, ರಾಮಕ್ಕ, ಪಾಲಕ್ಷ ರೆಡ್ಡಿ, ಮುಖಂಡರಾದ ಶಾಮಣ್ಣ, ವೆಂಕಟಸ್ವಾಮಿ, ನಾರಾಯಣಪ್ಪ, ಮುನಿಚಂದ್ರ, ಬೆನ್ನಘಟ್ಟ ನಾಗರಾಜ್, ಮುನಿಯಪ್ಪ, ಪಂಚಾಯಿತಿ ಕಾರ್ಯದರ್ಶಿ, ಸಿಬ್ಬಂದಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *