ಮಾಲೂರು : ಸರ್ಕಾರ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ರೂ 2 ಸಾವಿರ ಹಣ ಫಲಾನುಭವಿಗಳಿಗೆ ವರ್ಗಾವಣೆ ಕಾರ್ಯಕ್ರಮಕ್ಕೆ ಇದೇ ತಿಂಗಳು 30 ರಂದು ಮೈಸೂರಿನಲ್ಲಿ ಚಾಲನೆ ನೀಡುವ ಮೂಲಕ ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಯಲಿದೆ ಎಂದು ಶಾಸಕ ಕೆ ವೈ ನಂಜೇಗೌಡ ಅವರು ತಿಳಿಸಿದರು.

ಮಾಲೂರು : ಸರ್ಕಾರ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ರೂ 2 ಸಾವಿರ ಹಣ ಫಲಾನುಭವಿಗಳಿಗೆ ವರ್ಗಾವಣೆ ಕಾರ್ಯಕ್ರಮಕ್ಕೆ ಇದೇ ತಿಂಗಳು 30 ರಂದು ಮೈಸೂರಿನಲ್ಲಿ ಚಾಲನೆ ನೀಡುವ ಮೂಲಕ ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಯಲಿದೆ ಎಂದು ಶಾಸಕ ಕೆ ವೈ ನಂಜೇಗೌಡ ಅವರು ತಿಳಿಸಿದರು.
ಪಟ್ಟಣದ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಯಾದ “ಗೃಹಲಕ್ಷ್ಮೀ” ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಕಾರ್ಯಕ್ರಮ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಬಡವರ, ರೈತರ, ಕಾರ್ಮಿಕರ, ಜನಸಾಮಾನ್ಯರ ಪರವಾಗಿ ಆಡಳಿತ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷ ಘೋಷಿಸಿರುವ ಗ್ಯಾರೆಂಟಿ ಯೋಜನೆಗಳನ್ನು ಸರ್ಕಾರ ಬಂದ ಮೇಲೆ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ ಯೋಜನೆಗಳ ಸೌಲಭ್ಯವನ್ನು ಫಲಾನುಭವಿಗಳು ಪಡೆದಿದ್ದಾರೆ. ಇನ್ನೂ ಜುಲೈ 19 ರಿಂದ “ಗೃಹಲಕ್ಷ್ಮೀ” ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು. ಈವರೆಗೆ ತಾಲ್ಲೂಕಿನಲ್ಲಿ 80% ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ಸಂಬAಧಿಸಿದAತೆ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಇದೇ ತಿಂಗಳು 30 ರಂದು ದಿನಾಂಕ ನಿಗಧಿ ಮಾಡಿದ್ದು ಹಾಗೇ ಈ ಕಾರ್ಯಕ್ರಮವನ್ನು ಪ್ರತಿ ಗ್ರಾಮ ಪಂಚಾಯಿತಿ, ಪುರಸಭೆ ಮಟ್ಟದಲ್ಲೂ ಮಾಡಬೇಕು ಎಂದು ಸರ್ಕಾರ ಆದೇಶಿಸಿದೆ. ಆದ್ದರಿಂದ ಈ ಕಾರ್ಯಕ್ರಮವನ್ನು ನಿಗಧಿತ ದಿನಾಂಕದAದು ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರದ ನಿಯಮಗಳನ್ನು ಅನುಸರಿಸಿ ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು ಅಂದು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನೇಮಿಸಿರುವ ಆಡಳಿತ ಅಧಿಕಾರಿಗಳು ವೀಕ್ಷಣೆ ಮಾಡಲಿದ್ದು ನಾನು ಕೆಲವು ಪಂಚಾಯಿತಿಗಳಿಗೆ ಬೇಟಿ ನೀಡಿ ಕಾರ್ಯಕ್ರಮವನ್ನು ವೀಕ್ಷಿಸಲಾಗುವುದು. ಈ ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಈ ವೇಳೆ ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳಲ್ಲಿ ಎರಡನೇ ಅವಧಿಗೆ ನೂತನವಾಗಿ ಅಧ್ಯಕ್ಷರುಗಳಿಗೆ ಶಾಸಕರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ ರಮೇಶ್, ತಾಲ್ಲೂಕು ಪಂಚಾಯಿತಿ ಇಒ ಕೃಷ್ಣಪ್ಪ, ಸಿಡಿಪಿಒ ಬೈರಾರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಪ್ರದೀಪ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ ಮುನೇಗೌಡ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರುಗಳು ಇದ್ದರು.

Leave a Reply

Your email address will not be published. Required fields are marked *