ಮಾಲೂರು: 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಯು ಇಂದು ನಡೆದಿದ್ದು. ಮಾಲೂರು ತಾಲ್ಲೂಕಿನ ಹೆಚ್.ಹೋಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸನಹಳ್ಳಿ ಗ್ರಾಮದಲ್ಲಿ ಶಾಂತಿಯುತವಾಗಿ ಶೇಕಡ 86.4% ರಷ್ಟು ಮತದಾನ ನಡೆದಿದೆ.

ಮಾಲೂರು: 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಯು ಇಂದು ನಡೆದಿದ್ದು. ಮಾಲೂರು ತಾಲ್ಲೂಕಿನ ಹೆಚ್.ಹೋಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸನಹಳ್ಳಿ ಗ್ರಾಮದಲ್ಲಿ ಶಾಂತಿಯುತವಾಗಿ ಶೇಕಡ 86.4% ರಷ್ಟು ಮತದಾನ ನಡೆದಿದೆ.

ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದಿದ್ದು, ಮಾಲೂರು ತಾಲ್ಲೂಕಿನ ಹೆಚ್.ಹೋಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸನಹಳ್ಳಿ ಗ್ರಾಮದದಲ್ಲಿ ಶೇಕಡ 86.4% ಮತದಾನ ಪ್ರಕ್ರಿಯೆ ನಡೆದಿದೆ. ಇನ್ನೂ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಿತು. ಗ್ರಾಮದಲ್ಲಿ 844 ಮತಗಳಿದ್ದರೆ 729 ಮತಗಳು ಚಲಾವಣೆಯಾಗಿವೆ. ಅದರಲ್ಲಿ 350 ಮತಗಳನ್ನು ಮಹಿಳೆಯರು, 379 ಮತಗಳನ್ನು ಪುರುಷರು ಚಲಾಯಿಸಿದ್ದಾರೆ ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದರು.
ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆಯಲ್ಲಿ ಗ್ರಾಮದ ಹಿರಿಯರು, ಮುಖಂಡರು, ಯುವಕರು, ಮಹಿಳೆಯರು ಬೆಳಿಗ್ಗೆಯಿಂದಲೇ ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಬಿ ಎಲ್ ಒ. ಶೋಭಾರಾಣಿ ಸೇರಿದಂತೆ ಚುನಾವಣೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *